ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿ ಅಥವಾ ಜನರ ಹಿತಾಸಕ್ತಿಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಸಚಿವ ಸ್ಥಾನ, ಪ್ರಮುಖ ಖಾತೆಗಳು ಮತ್ತು ವೈಯಕ್ತಿಕ ಸ್ಥಾನಮಾನಗಳಿಗಾಗಿ ಕಾಂಗ್ರೆಸ್ಸಿಗರು ನಿರಂತರವಾಗಿ ಕಿತ್ತಾಟ ನಡೆಸುತ್ತಿದ್ದಾರೆ. ಈ ಆಂತರಿಕ ಅಸಮಾಧಾನ ಮತ್ತು ಅಧಿಕಾರದ ಹಪಾಹಪಿಯೇ ಸಚಿವರೊಬ್ಬರು ರಾಜೀನಾಮೆ ನೀಡಲು ಮುಖ್ಯ ಕಾರಣ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಪ್ರಸಂಗಕ್ಕೆ ಸಂಬಂಧಿಸಿದಂತೆ ಅವರು ರಾಜ್ಯ ಸರ್ಕಾರದ ವಿರುದ್ಧ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ. ವಿಜೇಂದ್ರ, ಇದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟದ “ಮೊದಲ ವಿಕೆಟ್ ಪತನ” ಎಂದು ವ್ಯಂಗ್ಯವಾಡಿದ ಅವರು, ರಾಮಲಿಂಗಾ ರೆಡ್ಡ್ಡಿ ಅವರು ಪಕ್ಷದ ಹಿರಿಯ ನಾಯ ಕರಾಗಿದ್ದು, ಅವರ ರಾಜೀನಾಮೆಯ ವೈಯಕ್ತಿಕ ನಿರ್ಧಾರದ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದರು.
ರಾಜ್ಯದ ಅಭಿವೃದ್ಧಿ, ಜನರ ಹಿತಾಸಕ್ತಿ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ: ವಿಜಯೇಂದ್ರ ಟೀಕೆ



