ಚಿತ್ರದುರ್ಗ: ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಇಂದು ಚಿತ್ರದುರ್ಗ ಭೇಟಿ ನೀಡಿದ್ದಾರೆ.
ಮೊದಲಿಗೆ ಚಿತ್ರದುರ್ಗ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರ ಮನೆಗೆ ಭೇಟಿ ನೀಡಿದ್ದಾರೆ. ಚಿತ್ರದುರ್ಗ ಮುರುಘ ಮಠದ ರಸ್ತೆಯಲ್ಲಿರುವ ತಿಪ್ಪಾರೆಡ್ಡಿ ಅವರ ನಿವಾಸಕ್ಕೆ ವಿಜಯೇಂದ್ರ ಅವರು ಭೇಟಿ ನೀಡಿದ್ದು,
ಈ ಸಂದರ್ಭದಲ್ಲಿ ಅವರೊಂದಿಗೆ ಪಕ್ಷದ ಮುಖಂಡ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಉಪಸ್ಥಿತರಿದ್ದರು.ಇಂದು ವಿಜಯೇಂದ್ರ ಅವರು ಚಿತ್ರದುರ್ಗದಲ್ಲಿರುವ ಹಲವು ಮಠಾಧೀಶರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ.