ಚೆನ್ನೈ: ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ತಿರುಚಿ ಪೂರ್ವ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ವಿಜಯ್ ಆ ಕ್ಷೇತ್ರದ ಸ್ಥಾನಕ್ಕೆ ರಾಜೀನಾಮೆ ನೀಡಿ ಪೆರಂಬೂರು ಕ್ಷೇತ್ರವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ರಾಜೀನಾಮೆ ನೀಡಿದ ತಿರುಚಿ ಪೂರ್ವ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಕೂಪಕೃಷ್ಣನ್ಗೆ ಟಿಕೆಟ್ ನೀಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ
ಇದರ ಮಧ್ಯೆ ಇಂದು ಬೆಳಿಗ್ಗೆ ಪಕ್ಷದ ನೂತನ ಶಾಸಕರ ಸಭೆ ಕರೆದಿದ್ದು, ಸಭೆಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಈಗಾಗಲೇ ಚೆನ್ನೈನ ಪಣಯೂರಿನಲ್ಲಿರುವ ಪಕ್ಷದ ಕಚೇರಿಗೆ ಅವರು ಆಗಮಿಸಿದ್ದಾರೆ.
ತಿರುಚಿ ಪೂರ್ವ ಕ್ಷೇತ್ರಕ್ಕೆ ರಾಜೀನಾಮೆಗೆ ವಿಜಯ್ ನಿರ್ಧಾರ



