ಹಾಸನ: ನಿನ್ನೆ ಸಂಜೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ ಕಾರ್ಮಿಕ ವಸಂತ್ ಅವರ ಮೃತದೇಹವನ್ನು ಶವ ಪರೀಕ್ಷೆಗೆ ಆಸ್ಪದ ಕೊಡದೆ ದಾರಿಯಲ್ಲೇ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ನಿನ್ನೆ ಸಂಜೆ ಹಾಸನ ಜಿಲ್ಲೆಯ ಮತ್ತಾವರ ಬಳಿ ಆನೆ ದಾಳಿಗೆ ಕಾರ್ಮಿಕ ವಸಂತ್ ತುತ್ತಾಗಿ ಮೃತಪಟ್ಟಿದ್ದರು. ಆನೆ ದಾಳಿಯಿಂದ ದಿನದಿಂದ ದಿನಕ್ಕೆ ಸಾವಿನ ಪ್ರಕರಣ ಹೆಚ್ಚಾಗುತ್ತಿರುವುದಕ್ಕೆ…ಆಕ್ರೋಶ ವ್ಯಕ್ತಪಡಿಸಿ ಮುಖ್ಯಮಂತ್ರಿ ಹಾಗೂ ಅರಣ್ಯಸಚಿವರು ಸ್ಥಳಕ್ಕೆ ಬರುವವರೆಗೂ ಶವವನ್ನು ತೆಗೆಯಲು ಬಿಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.
ಸ್ಥಳಕ್ಕೆ ಶಾಸಕ ಎಚ್.ಕೆ.ಸುರೇಶ್ ಭೇಟಿ ನೀಡಿದ್ದಾರೆ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಗ್ರಾಮಸ್ಥರ ಮನವೊಲಿಸಲು ಹರಸಾಹಸ ಪಡುತ್ತಿದ್ದು, ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ.