ಬೆಂಗಳೂರು: ಅಧಿಕೃತವಾಗಿ ಬಿಜೆಪಿ ಪಕ್ಷದಿಂದ ಆಯ್ಕೆಯಾಗಿ ಈಗಲೂ ಬಿಜೆಪಿಯಲ್ಲಿಯೇ ಇರುವ ಮಾಜಿ ಸಚಿವರು ಹಾಗೂ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರು ಇಂದುಸದಾಶಿವನಗರದಲ್ಲಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
ಸದಾಶಿವನಗರದಲ್ಲಿರುವ ಪರಮೇಶ್ವರ್ ಮನೆಗೆ ಭೇಟಿ ನೀಡಿದ ಉಭಯ ಶಾಸಕರು ಕೆಲ ಹೊತ್ತಿನ ಪರಮೇಶ್ವರ್ ಅವರೊಂದಿಗೆ ಮಾತುಕತೆ ನಡೆಸಿ ಅಲ್ಲಿಂದ ತೆರಳಿದ್ದಾರೆ. ಈಗಾಗಲೇ ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ ನಡೆಯುವ ವೇಳೆ ಅಲ್ಲಿ ಕಾಣಿಸಿಕೊಂಡು ಭೋಜನಕೂಟಕ್ಕೆ ಆಹ್ವಾನದ ಮೇಲೆ ತೆರಳಿದ್ದೆ ಎಂದು ಶಾಸಕ ಸೋಮಶೇಖರ್ ತಿಳಿಸಿದ್ದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿಯಿಂದ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರು ಅಂತರ ಕಾಯ್ದುಕೊಂಡಿದ್ದು ಇಂದಿನ ಅವರ ಭೇಟಿ ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.