ಇಂದು ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ನರೇಗಲ್ ಗ್ರಾಮದಲ್ಲಿ ಕಾರ ಹುಣ್ಣಿಮೆಯ ಹಬ್ಬದ ಸಂಭ್ರಮದಲ್ಲಿ ಯುವಕರು ಹಾಗೂ ಅನ್ಯ ಕೋಮಿನ ನಡುವೆ ಗಲಾಟೆ ಉಂಟಾಗಿ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಶ್ರೀ ಶಿವರಾಜ್ ಕುರುಬರ, ಶ್ರೀ ಲೋಹಿತ್ ಕುರುಬರ ಶ್ರೀ ಮಲ್ಲಪ್ಪ ಕೊಡಮಗ್ಗಿ ಅವರ ಆರೋಗ್ಯವನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿರವರು ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದರು. ಈ ಸಂಧರ್ಭದಲ್ಲಿ ಕೀಮ್ಸ್ ನಿರ್ದೇಶಕರಾದ ಡಾ.ಕೆ.ಎಫ್ ಕಮ್ಮಾರ ಸೇರಿದಂತೆ ವೈದ್ಯರು ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.



