ಬೆಂಗಳೂರು: ರಾಜ್ಯ ಸಂಪುಟ ವಿಸ್ತರಣೆಯ ಕಸರತ್ತು ಮುಂದೂಡಲ್ಪಟ್ಟಿದೆ. ನಿನ್ನೆ ಇಡೀ ದೆಹಲಿಯಲ್ಲಿ ವರಿಷ್ಠರೊಂದಿಗೆ ರಾಜ್ಯ ನಾಯಕರು ನಡೆಸಿದ ಸಮಾಲೋಚನಾ ಸಭೆಯಿಂದ ಯಾವುದೇ ರೀತಿಯ ಫಲಪ್ರದವಾಗಿಲ್ಲ. ರಾಜ್ಯ ನಾಯಕರು ಸಿದ್ದಪಡಿಸಿ ದೆಹಲಿಗೆ ಕೊಂಡೊಯ್ದಿದ್ದ ಸಂಭಾವ್ಯ ಸಚಿವರ ಪಟ್ಟಿ ವರಿಷ್ಠರಿಗೆ ತೃಪ್ತಿಕರವಾಗಿಲ್ಲ ಎಂದು ತಿಳಿದುಬಂದಿಲ್ಲ. ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು ನೀಡಿದ್ದ ಹೆಸರುಗಳನ್ನು ತಿರಸ್ಕರಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಮುಂದೆ ರಾಜ್ಯದಲ್ಲಿ ನಡೆಯುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆ ಸೇರಿದಂತೆ ಬಹುತೇಕ ಹೊಸಬರಿಗೆ ಅವಕಾಶ ನೀಡುವ ಬಗ್ಗೆ ವರಿಷ್ಠರು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ರಾಹುಲ್ಗಾಂಧಿ ಅವರು ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಶೇ.60ರಷ್ಟು ಹೊಸಬರಿಗೆ ಅವಕಾಶ ಕಲ್ಪಿಸುವುದರ ಜತೆಗೆ ಪರಿಶಿಷ್ಟ ಜಾತಿ ಪಂಗಡ, ಹಿಂದುಳಿದ ವರ್ಗದವರಿಗೆ ಹೆಚ್ಚಿನ ಅವಕಾಶ ನೀಡುವಂತೆ ಪಟ್ಟಿಯಲ್ಲಿ ಹೆಸರಿರಬೇಕು ಎಂದು ಸೂಚನೆ ನೀಡಿದ್ದಾರೆ.



