ಮಾಲೂರು: ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಪ್ಪದೆ ತಮ್ಮ ಮತ ದಾನದ ಹಕ್ಕನ್ನು ಚಲಾಯಿಸಿ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಂದ್ರ ತಿಳಿಸಿದರು. ತಾಲ್ಲೂಕಿನ ಸಂತೇಹಳ್ಳಿ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಕೋಲಾರ ತಾಲ್ಲೂಕು ಪಂಚಾಯಿತಿ ಸ್ವೀಪ್ ಸಮಿತಿ ವತಿಯಿಂದ 2024 ರ ಲೋಕಸಭಾ ಚುನಾವಣೆ ಮತದಾನ ಜಾಗೃತಿ ಜಾಥಾ ಹಾಗೂ ರಂಗೋಲಿ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡುತ್ತಿದ್ದರು.
ನಮ್ಮ ಮತ, ನಮ್ಮ ಹಕ್ಕು ಪ್ರತಿಯೊಬ್ಬ ವ್ಯಕ್ತಿಯು ಮತದಾನ ಮಾಡುವುದರಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಲಿಷ್ಠ ಗೊಳಿಸುವುದು ಹಾಗೂ ಗೌರವ ನೀಡುವಂತೆ ಆಗುತ್ತದೆ ಆದ್ದರಿಂದ ಎಲ್ಲಾ ಮತ ದಾರರು ತಪ್ಪದೇ ಮತದಾನ ಮಾಡಿ ಎಂದು ಹೇಳಿದರು.ಏಪ್ರಿಲ್ 26ರಂದು ಪ್ರತಿಯೊಬ್ಬ ಮತದಾರ ಮತದಾನ ಕೇಂದ್ರಕ್ಕೆ ಬಂದು ತಪ್ಪದೆ ಮತದಾನ ಮಾಡಿ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಸಂವಿಧಾನದಡಿಯಲ್ಲಿ ಜೀವಿಸುವ ಪ್ರತಿಯೊಬ್ಬ ಮತದಾರನಿಗೂ ಮತದಾನಕ್ಕೆ ಹಕ್ಕಿದೆ ಮತದಾರರು ಅದನ್ನು ನಿರ್ಭೀತಿಯಿಂದ ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾಯಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನದ ಅರಿವು ಮೂಡಿಸುವ ನನ್ನ ಮತ ನನ್ನ ಹಕ್ಕು ಹೇಳಿಕೆಯ ಸೆಲ್ಪೀ ಪೋಟೋ ಗ್ಯಾಲರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಸಾರ್ವಜನಿಕರಿಗೆ ಕರಪತ್ರಗಳನ್ನು ನೀಡಲಾಯಿತು.ಕಡ್ಡಾಯ ಮತದಾನ ಮಾಡಿ ಎಂದು ಪ್ರತಿಜ್ಞಾವಿಧಿಯನ್ನು ಭೋದಿಸಲಾಯಿತು.
ಈ ಸಂದರ್ಭದಲ್ಲಿಪ್ರಥಮ ದರ್ಜೆ ಸಹಾಯಕ ಮುನಯ್ಯ ಗ್ರಾ. ಪಂ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.