ಹೊಸಕೋಟೆ: ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ 18 ವರ್ಷ ಮೇಲ್ಪಟ್ಟ ದೇಶದ ಪ್ರತಿಯೊಬ್ಬರೂ ಮತದಾನ ಮಾಡಬೇಕೆನ್ನುವ ಕಾರಣದಿಂದ ಈ ಮತದಾನ ಜಾಗೃತಿ ಜಾಥವನ್ನು ಏರ್ಪಡಿಸಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಕಿಶನ್ ಕಲಾಲ್ ಹೇಳಿದರು.
ಅವರು ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ಏರ್ಪಡಿಸಿದ್ದ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.ನಗರದ ಪ್ರಮುಖ ಬೀದಿಗಳಲ್ಲಿ ರ್ಯಾಲಿ ನಡೆಯಲಿದ್ದು ಸಾರ್ವಜನಿಕರು ನಿರ್ಭೀತಿಯಿಂದ, ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಸ್ವಂತ ವಿವೇಚನೆಯಿಂದ ಮತದಾನ ಪ್ರಕ್ರಿಯೆಯಲ್ಲಿ ಭಾಗ
ವಹಿಸಬೇಕೆಂಬ ಸಂದೇಶವನ್ನು ಸಾರಲಾಯಿತು.
ಇದೇ ರೀತಿ ತಾಲೂಕಿನ ಹೋಬಳಿ ಕೇಂದ್ರಗಳಲ್ಲೂ ಸಹ ಸರಕಾರೇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ತಿಳಿಸಿದರು.ತಹಶೀಲ್ದಾರ್ ಎಂ. ವಿಜಯಕುಮಾರ್ ಮಾತನಾಡಿ ಪ್ರಜಾಪ್ರಭುತ್ವದ ಅತ್ಯಂತ ಸುಂದರ ಕಲ್ಪನೆಯು ಮತದಾನ ಪ್ರಕ್ರಿಯೆಯು ಪ್ರಜಾಪ್ರಭುತ್ವದ ಅತ್ಯಂತ ಸುಂದರ ಕಲ್ಪನೆಯಾಗಿದ್ದು ನಮ್ಮ ಹಕ್ಕುಗಳನ್ನು ಕಾಪಾಡಬೇಕಾದ ಸೂಕ್ತ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು.
ಸಂವಿಧಾನದಲ್ಲಿ ನೀಡಿರುವ ಹಕ್ಕುಗಳನ್ನು ಪಡೆಯಲು ನೀಡುವಷ್ಟೇ ಪ್ರಾಮುಖ್ಯತೆಯನ್ನು ಜವಾಬ್ದಾರಿಗಳ್ನು ನಿರ್ವಹಿಸಲು ನೀಡಬೇಕಾದ್ದು ಪ್ರತಿಯೊಬ್ಬರ ಕರ್ತವ್ಯವಾಗಿದೆ.ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ಜಹೀರ್ ಅಬ್ಬಾಸ್, ಚುನಾವಣಾ ಶಾಖೆಯ ಅಧಿಕಾರಿಲಕ್ಷ್ಮೀನಾರಾಯಣ್, ತಾಲೂಕು ಆಡಳಿತದ ಸಿಬ್ಬಂದಿಗಳಾದ ರಾಜುಗೌಡ, ಸಂತೋಶ್, ಅಂಬರೀಶ್, ಆಂಜಿನಮ್ಮ, ಆನಂದ್ ಇನ್ನಿತರರು ಹಾಜರಿದ್ದರು.