ಬೆಂಗಳೂರು: ಬಾಗಲಕೋಟೆ ನಗರದ ನವನಗರದಲ್ಲಿರುವ ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರನ್ನು ಮತದಾನ ಮಾಡಲು ವಾರ್ಡನ್ ಹೊರಗೆ ಬಿಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಸುಮಾರು 20 ರಿಂದ 30 ವಿದ್ಯಾರ್ಥಿನಿಯರು ತಮಗೆ ಮತ ಚಲಾಯಿಸಲು ಅವಕಾಶ ನೀಡುತ್ತಿಲ್ಲ ಎಂದು ದೂರಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಎಬಿವಿಪಿ ಕಾರ್ಯಕರ್ತರು ಸ್ಥಳಕ್ಕೆ ಭೇಟಿ ನೀಡಿ ಆಕ್ರೋಶ ವ್ಯಕ್ತಪಡಿಸಿದರು.



