ಬೆಂಗಳೂರು: `ಗವಿಮಾರ್ಗ’ ಪುಸ್ತಕ ಬಿಡುಗಡೆ, ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಮತ್ತು ಮಂಡಲ್ ವರದಿ ಆಗಿದ್ದೇನು?, ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವು ಡಿಸೆಂಬರ್ 01, (ಶುಕ್ರವಾರ) 2023 ರಂದು ಬೆಳಿಗ್ಗೆ 11 ಗಂಟೆಗೆ ಕ್ವೀನ್ಸ್ ರಸ್ತೆಯಲ್ಲಿರುವ ಕೃಷಿ ತಂತ್ರಜ್ಞಾನ ಸಂಸ್ಥೆಯ ಅರಕೇರಿ ಸಭಾಂಗಣದಲ್ಲಿ ನಡೆಯಲಿದೆ.
ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರು ಡಾ. ಎಂ.ಎಸ್.ಮಣಿ ಅವರು ಬರೆದಿರುವ `ಗವಿಮಾರ್ಗ’ ಪುಸ್ತಕವನ್ನು ಬಿಡುಗಡೆ ಮಾಡುವವರು. ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಅವರು ವಿಚಾರ ಸಂಕಿರಣ ಉದ್ಘಾಟಿಸುವರು, ಮಾಜಿ ಸಚಿವ ಎಚ್.ಆಂಜನೇಯ ಅವರು ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಮಾಡುವರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘದ ಅಧ್ಯಕ್ಷ ಕೆ.ಆರ್.ನೀಲಕಂಠ ಅಧ್ಯಕ್ಷತೆ ವಹಿಸುವರು.
ಶ್ರೀ ಷಡಕ್ಷರಿ ಮುನಿ ದೇಶೀಕೇಂದ್ರ ಸ್ವಾಮೀಜಿ, ಪೀಠಾಧ್ಯಕ್ಷರು, ಆದಿ ಜಾಂಬವ ಬೃಹನ್ಮಠ ಹಿರಿಯೂರು ನಗರ, ಇವರು ಪುಸ್ತಕ ಪರಿಚಯ ಮಾಡಿಕೊಡಲಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಹೆಚ್.ಕಾಂತರಾಜ ಮತ್ತು ಡಾ.ಮನೋಹರ್ ಯಾದವ್, ನಿವೃತ್ತ ಪ್ರಾಧ್ಯಾಪಕರು, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ, ಬೆಂಗಳೂರು ಇವರು `ಮಂಡಲ್ ವರದಿ ಆಗಿದ್ದೇನು?, ಎಂಬ ವಿಚಾರದ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ. ಪ್ರಜಾಪ್ರಗತಿ ಸಂಪಾದಕ ಎಸ್.ನಾಗಣ್ಣ ಹಾಗೂ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಅವರು ವಿಷಯದ ಮೇಲೆ ಪ್ರತಿಕ್ರಿಯಿಸುವರು.
ಎಂ. ಸಿದ್ದರಾಜು, ಮಾಜಿ ಅಧ್ಯಕ್ಷರು, ಕರ್ನಾಟಕ ಮಾಧ್ಯಮ ಅಕಾಡೆಮಿ, ಹೆಚ್.ಕಾಂತರಾಜ, ಮಾಜಿ ಅಧ್ಯಕ್ಷರು, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ, ಲಕ್ಷ್ಮಣ ಕೊಡಸೆ, ಅಧ್ಯಕ್ಷರು ಜನಮನ ಪ್ರತಿಷ್ಠಾನ, ಟಿ.ಎಸ್.ಆರ್ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಗಂಗಾಧರ ಮೊದಲಿಯಾರ್, ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಹಿಂದುಳಿದ ಜಾತಿಗಳ ಒಕ್ಕೂಟದ ಮಾಜಿ ಅಧ್ಯಕ್ಷ ಪ್ರೊ || ಬಿ.ಕೆ.ರವಿ ಇವರುಗಳಿಗೆ ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಕಾರ್ಯಕ್ರಮವನ್ನು ವರದಿ ಮಾಡಲು ತಮ್ಮ ಪತ್ರಿಕೆಯ / ಸುದ್ದಿ ವಾಹಿನಿಯ ವರದಿಗಾರರು ಹಾಗೂ ಛಾಯಾಗ್ರಾಹಕರನ್ನು ಕಳುಹಿಸಿಕೊಡಬೇಕಾಗಿ ವಿನಂತಿ. ಸಂಪರ್ಕಕ್ಕಾಗಿ: ಶಿವಪ್ಪ, ಕಾರ್ಯದರ್ಶಿ : 9902941218.