ಬೆಂಗಳೂರು/ಮೈಸೂರು: ಇರಾನ್ ಇಸ್ರೇಲ್ ಯುದ್ಧದ ಪರಿಣಾಮ ರಾಜ್ಯದ ಹಲವೆಡೆ ಆಟೋಗಳಿಗೆ ಗ್ಯಾಸ್ ಪೂರೈಕೆಯಲ್ಲಿ ಅಭಾವ ಉಂಟಾಗಿದ್ದು, ಈ ಹಿನ್ನೆಲೆ ಚಾಲಕರು ಪರದಾಟ ನಡೆಸುತ್ತಿದ್ದಾರೆ. ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಕೇಂದ್ರ ಸರ್ಕಾರಕ್ಕೆ ನಾವು ಕೂಡ ಬೇಡಿಕೆ ಇಟ್ಟಿದ್ದೇವೆ. ಕಾಳ ಸಂತೆಯಲ್ಲಿ ಸಿಲಿಂಡರ್ ಏನಾದರು ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ವಿಚಾರವಾಗಿ ಮಾತನಾಡಿದ ಅವರು ಯುದ್ಧದಿಂದ ತೊಂದರೆ ಆಗುತ್ತಿದೆ ಅನ್ನುವುದು ಎಲ್ಲರಿಗೂ ಗೊತ್ತು. ಆದರೆ ನಮಗೆ ಕೊಡಬೇಕಾಗಿರುವುದನ್ನು ಕೊಡಬೇಕು ಅಲ್ವಾ? ಎಲ್ಲಾ ರಾಜ್ಯಗಳಿಗೆ ಕೊಟ್ಟಂತೆ ನಮಗೂ ಪೂರೈಕೆ ಮಾಡಬೇಕು. ನಮಗೂ ಸಿಲಿಂಡರ್ ಹಾಗು ತೈಲ ಬೇಕು. ಆದರೆ ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರದಿಂದ ಉತ್ತಮ ಆಡಳಿತ ನೀಡಲಾಗಿದೆ. ಈ ಬಾರಿ ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳೇ ಗೆಲ್ಲುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮತದಾರರು ನಮ್ಮ ಪರ ತೀರ್ಮಾನಕೊಡುತ್ತಾರೆ. ಗ್ಯಾರಂಟಿಗಳನ್ನು ಮೀರಿಯೂ ಜನತೆ ಉತ್ತಮ ಪ್ರತಿಕ್ರಿಯೆ ನೀಡುತ್ತಾರೆ. ಬಿಜೆಪಿಯವರು ಇಲ್ಲ ಸಲ್ಲದ ಆರೋಪ ಮಾಡುತ್ತಾರೆ. ಆದರೂ ಸಹ ನಮ್ಮ ಆಡಳಿತದ ವೈಖರಿಯನ್ನು ಮೆಚ್ಚಿ ಜನತೆ ನಮಗೆ ಮತ ನೀಡುತ್ತಾರೆ ಎಂದಿದ್ದಾರೆ.



