ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ಡಿವೈಎಸ್ಪಿ ವಿಭಾಗಗಳಲ್ಲಿ ಬರುವ ಪೊಲೀಸ್ ಠಾಣಾ ರೌಡಿ ಪಟ್ಟಿಯಲ್ಲಿರುವ ಅಂದಾಜು ೨೫೦ ರೌಡಿಗಳ ಪೆರೇಡ್ಗಳನ್ನು ನಾಲ್ಕು ವಿಭಾಗಗಳಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ವಿಚಾರಣೆ ಇಂದು ಬೆಳಿಗ್ಗೆ ನಡೆಯಿತು.
ಆನೇಕಲ್, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ವಿಭಾಗಗಳ ೨೮ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಬರುವ ರೌಡಿ ಪಟ್ಟಿಗಳಲ್ಲಿ ಇರುವ ವ್ಯಕ್ತಿಗಳನ್ನು ಕರೆಸಿ ಅಧಿಕಾರಿಗಳು ಯಾವುದೇ ತರಹ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಬಾರದೆಂದು ಎಚ್ಚರಿಕೆ ನೀಡಿದರು. ಕೆಲ ರೌಡಿಗಳು ನ್ಯಾಯಾಲಯಗಳಿಂದ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಸಿಕೊಂಡಿದ್ದ ರೌಡಿಗಳನ್ನು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ ನೀಡಿದರು.
ಬೆಂಗಳೂರು ಗ್ರಾಮಾಂತರ ಎಸ್ ಪಿ ಚಂದ್ರಕಾAತ್ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ಪ್ರಸನ್ನ ರವರ ಮಾರ್ಗದರ್ಶನದಲ್ಲಿ ಮತ್ತು ನೇತೃತ್ವದಲ್ಲಿ ರೌಡಿಗಳ ನಡೆಯಿತು
ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ರೌಡಿಗಳಿಗೆ ಎಚ್ಚರಿಕೆ



