ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ತೂಬಗೆರೆ ಹೋಬಳಿ ದೇವರಬೆಟ್ಟ ಅರಣ್ಯ ಪ್ರದೇಶದಲ್ಲಿ ಬಿಸಿಲಿನ ಬೇಗೆ ದಣಿವು ನೀಗಿಸುವ ನಿಟ್ಟಿನಲ್ಲಿ ಪರಿಸರ ಸಂರಕ್ಷಣಾ ಸಮಿತಿ ಹಾಗು ಅರಣ್ಯ ಇಲಾಖೆಯ ಸಹಕಾರದೊಂದಿಗೆ ಕಾಡು ಪ್ರಾಣಿಗಳಿಗೆ ನೀರುಣಿಸುವ ಉದ್ದೇಶದಿಂದ ತೊಟ್ಟಿಗಳಿಗೆ ಟ್ಯಾಂಕರ್ ಮುಖಾಂತರ ತುಂಬಿಸುವದರ ಮೂಲಕ ಕಾಡು ಪ್ರಾಣಿ ಪಕ್ಷಿಗಳಿಗೆ ಧಣಿವು ತೀರಿವಂತಹದು ಕಾರ್ಯ ಮಾಡಲಾಯಿತು.
ದೊಡ್ಡಬಳ್ಳಾಪುರ ತಾಲ್ಲೂಕು ತೂಬಗೆರೆ ಹೋಬಳಿ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಪಕ್ಕದಲ್ಲಿ ಇರುವ ದೇವರ ಬೆಟ್ಟ ಅರಣ್ಯದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು ಅರಣ್ಯದಲ್ಲಿ ನೀರಿನ ಅಂಶ ಕಡಿಮೆಯಾಗಿ ಹಳ್ಳ ಕೊಳ್ಳಗಳು ನೀರಿಲ್ಲದೆ ಬತ್ತಿ ಹೋಗಿವೆ ಅದರಿಂದ ಅರಣ್ಯದಲ್ಲಿ ವಾಸಮಾಡು ಕಾಡು ಪ್ರಾಣಿಗಳು ಕುಡಿಯಲು ನೀರಿಲ್ಲದೆ ಪರಿತಪ್ಪಸುವಂತಹ ವ್ಯವಸ್ಥೆಯಲ್ಲಿ ಅರಣ್ಯ ಇಲಾಖೆ ಅರಣ್ಯದಲ್ಲಿ ವಾಸಿಸುವ ಪ್ರಾಣಿ ಹಾಗು ಪಕ್ಷಿಗಳಿಗೆ ನೀರುಣಿಸಲಾಯಿತು.