ಮಾಗಡಿ: ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಶ್ರಮದಿಂದ ಮತ್ತೊಮ್ಮೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ನನ್ನ ಪರವಾಗಿ ಉತ್ತಮ ಫಲಿತಾಂಶ ಬರುತ್ತೆ ಎಂಬ ವಿಶ್ವಾಸವಿದೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರಾದ ಡಿ.ಕೆ.ಸುರೇಶ್ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯ ನಿಮಿತ್ತವಾಗಿ ಮತದಾನ ವೀಕ್ಷಿಸಲು ಮಾಗಡಿ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬೆಂಗಳೂರು ನಗರ ಹೊರತುಪಡಿಸಿ ಉಳಿದ ಎಲ್ಲಾ ಕ್ಷೇತ್ರದಲ್ಲಿ ಉತ್ತಮವಾಗಿ ಮತದಾನ ನಡೆದಿದ್ದು,
ಈ ಬಾರಿ ಉತ್ತಮ ಫಲಿತಾಂಶ ನನ್ನ ಪರವಾಗಿ ಬರುತ್ತದೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದರು.ಈ ಸಂದರ್ಭದಲ್ಲಿ ಶಾಸಕ ಹೆಚ್.ಸಿ.ಬಾಲಕೃಷ್ಣ, ಪೂಜಾರಿಪಾಳ್ಯ ಕೃಷ್ಣಮೂರ್ತಿ, ಜೆ.ಪಿ.ಚಂದ್ರೇಗೌಡ, ಟಿಎಪಿಸಿಎಂಎಸ್ ಮಂಜು, ಡೂಂಲೈಟ್ ಮೂರ್ತಿ, ಯುವವಕೀಲ ಮಂಜುನಾಥ್, ಗಾರ್ಮೆಂಟ್ಸ್ ರಮೇಶ್, ಚಿಲಿಪಿಲಿ ರಾಜಣ್ಣ, ಶಾಂತಕುಮಾರ್, ಮಂಜುನಾಥ್, ಸುನಿಲ್ ಸೇರಿದಂತೆ ಮತ್ತಿತರಿದ್ದರು.