This is the title of the web page
This is the title of the web page

ಅಶೋಕ್ ಎದುರಾಳಿಯಾದರೆ ಸ್ವಾಗತ: ಡಿಕೆಶಿ

ಶೃಂಗೇರಿ: ತಮ್ಮ ವಿರುದ್ಧ ಕಂದಾಯ ಸಚಿವ ಬಿಜೆಪಿಯ ಆರ್. ಅಶೋಕ್ ಸ್ಪರ್ಧಿಸಿದರೆ ಸ್ವಾಗತ ಮಾಡುವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕಂದಾಯ ಸಚಿವ ಅಶೋಕ್ ಅವರು ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಸ್ಪರ್ಧಿಸುತ್ತಾರೆ ಎಂದು ಕೇಳಿಬಂದಿರುವ ಮಾತುಗಳಿಗೆ ಪ್ರತಿಕ್ರಿಯೆ ನೀಡಿರುವ ಶಿವಕುಮಾರ್, ರಾಜಕಾರಣದಲ್ಲಿ ಯಾರೇ ಬಂದರೂ ಎದುರಿಸಬೇಕು, ಹೋರಾಡಬೇಕು. ರಾಜಕಾರಣದಲ್ಲಿ ಯಾರು ಯಾರ ವಿರುದ್ಧವಾದರೂ ನಿಲ್ಲಬಹುದು.

ಅಶೋಕ್ ಸ್ಪರ್ಧೆ ಮಾಡುವುದಾದರೆ ಅವರಿಗೆ ನನ್ನ ಸ್ವಾಗತವಿದೆ. ಬಿಜೆಪಿಯವರ ಈ ದೊಡ್ಡ ನಿರ್ಧಾರವನ್ನು ನಾನು ಸ್ವಾಗತಿಸುವೆ. ಶಾರದಾಂಭೆ ದರ್ಶನಕ್ಕೆ ಬಂದಿದ್ದೇನೆ. ಇದರಲ್ಲಿ ರಾಜಕಾರಣ ಇಲ್ಲ. ಮೂರನೇ ಪಟ್ಟಿ ಚರ್ಚೆ ಆಗುತ್ತಿದೆ. ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದರು.

ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಅವರದ್ದೇ ಕ್ಷೇತ್ರದಲ್ಲಿ ಕಟ್ಟಿ ಹಾಕಲು ಬಿಜೆಪಿ ಹೈಕಮಾಂಡ್ ಭಾರೀ ಚಿಂತನೆ ನಡೆಸಿದೆ. ಈ ಇಬ್ಬರು ವಿರುದ್ಧ ಪ್ರಬಲ ನಾಯಕರನ್ನ ಕಣಕ್ಕಿಳಿಸುಲು ಬಿಜೆಪಿ ರಣತಂತ್ರ ರೂಪಿಸುತ್ತಿದೆ ಎನ್ನುವ ಮಾತುಗಳು ಕೇಳಿಬಂದಿದ್ದವು.

ನಿನ್ನೆ-ಮೊನ್ನೆ ದೆಹಲಿಯಲ್ಲಿ ನಡೆದ ಬಿಜೆಪಿ ಉನ್ನತ ಮಟ್ಟದ ನಾಯಕರ ಸಭೆಯಲ್ಲಿ ಡಿಕೆಶಿ ವಿರುದ್ಧ ಆರ್. ಅಶೋಕ್ ಅವರನ್ನು ಕಣಕ್ಕಿಳಿಸಬೇಕೆಂದು ಚರ್ಚೆ ನಡೆದಿತ್ತು ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಶಿವಕುಮಾರ್ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.