ನವದೆಹಲಿ: ನಿಕಟಪೂರ್ವ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ನಿವಾಸದಿಂದ ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಕಚೇರಿಯನ್ನು ಶುಕ್ರವಾರ ಸ್ಥಳಾಂತರಿಸಲಾಗಿದೆ. ಕ್ರೀಡಾ ಸಚಿವಾಲಯ ಇತ್ತೀಚೆಗೆ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.
ನವದೆಹಲಿಯ ಹರಿನಗರ ಪ್ರದೇಶದಲ್ಲಿ ಡಬ್ಲ್ಯುಎಫ್ಐನ ಹೊಸ ಕಚೇರಿ ಕಾರ್ಯನಿರ್ವಹಿಸಲಿದೆ ಎಂದು ಮೂಲಗಳು ಸುದ್ದಿಸಂಸ್ಥೆಗೆ ತಿಳಿಸಿವೆ.
ಡಬ್ಲ್ಯುಎಫ್ಐ ಅಧ್ಯಕ್ಷ ಸಂಜಯ್ ಸಿಂಗ್ ನೇತೃತ್ವದ ಹೊಸ ಆಡಳಿತ ಮಂಡಳಿಯನ್ನು ಡಿ.24ರಂದು ಕ್ರೀಡಾ ಸಚಿವಾಲಯ ಅಮಾನತುಗೊಳಿಸಿತ್ತು. ಬ್ರಿಜ್ ಭೂಷಣ್ ಅವರ ನಿವಾಸದಲೇ ಕಚೇರಿ ಕಾರ್ಯನಿರ್ವಹಿಸುತ್ತಿರುವುದರಿಂದ ಕಠಿಣ ಕ್ರಮ ತೆಗೆದುಕೊಳ್ಳಲು ಒಂದು ಕಾರಣ ಎಂದು ಉಲ್ಲೇಖಿಸಿತ್ತು.