ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚಾಕುವಿನಿಂದ ಇರಿದು ಪತಿಯನ್ನು ಪತ್ನಿಯೇ ಭೀಕರವಾಗಿ ಕೊಲೆ ಮಾಡಿರುವ ದುರ್ಘಟನೆ ಅನ್ನಪೂರ್ಣೇಶ್ವರಿ ನಗರದ ಮಲ್ಲತ್ತಹಳ್ಳಿಯಲ್ಲಿ ನಡೆದಿದೆ.
ಮಲ್ಲತ್ತಹಳ್ಳಿಯ ತೌಹಿಬ್ ಪಾಷ ಕೊಲೆಯಾದವರು, ಪತ್ನಿ ಸೋಹಾನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು ಆಕೆ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ನಡೆದ ಜಗಳ ವಿಕೋಪಕ್ಕೆ ತಿರುಗಿ. ಪತ್ನಿ ಆಕೆಯ ತಾಯಿ, ಮತ್ತು ತಂದೆ ಮೂವರು ಸೇರಿ ತೌಹಿಬ್ ಪಾಷ ನನ್ನು ಕೊಲೆ ಮಾಡಿದ್ದಾರೆ ಎಂದು ತೌಹಿಬ್ ಪಾಷ ಕುಟುಂಬಸ್ಥರು ಆರೋಪಿಸಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಪತ್ನಿ, ಅತ್ತೆ, ಮಾವನನ್ನು ವಶಕ್ಕೆ ಪಡೆದು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಕೌಟುಂಬಿಕ ಕಲಹ ಚಾಕು ಇರಿದು ಪತಿಯನ್ನು ಭೀಕರವಾಗಿ ಕೊಲೆಗೈದ ಪತ್ನಿ



