ತುಮಕೂರು: ಚಿನ್ನಾಭರಣ ಸಹಿತ ಪರಾರಿಯಾದ ಹೆಂಡತಿಯ ನಡತೆಯಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನಿಬ್ಬರು ಪುಟ್ಟ ಮಕ್ಕಳನ್ನೂ ಕೊಲೆ ಮಾಡಿ, ತಾನೂ ನೇಣಿಗೆ ಶರಣಾಗಿರುವ ಅಮಾನವೀಯ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಈ ಭೀಕರ ಕೃತ್ಯ ನಡೆದಿದ್ದು, ಇಂದು ಬೆಳಗ್ಗೆ ಅಕ್ಕಪಕ್ಕದ ಮನೆಯವರು ಗಮನಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಲ್ಕೆರೆ ಗ್ರಾಮದ ಮಲ್ಲೇಶ್ವರಸ್ವಾಮಿ ದೇಗುಲದ ಅರ್ಚಕ ಹಾಗೂ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಶಿವಣ್ಣ (40) ಆತ್ಮಹತ್ಯೆ ಮಾಡಿಕೊಂಡ ದುರ್ದೆವಿ.ಸಾವಿಗೂ ಮುನ್ನ ಆತ ತನ್ನ ಮಕ್ಕಳಾದ ಜೀವನ್ (10) ಮತ್ತು ಪ್ರಾಣೇಶ್ (5) ಎಂಬುವವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.ಶಿವಣ್ಣನ ಪತ್ನಿ ಪರಪುರುಷನ ಜೊತೆ ಅಕ್ರಮ ಸಂಬAಧ ಹೊಂದಿದ್ದಳು. ಇದೇ ವಿಚಾರವಾಗಿ ದಂಪತಿಗಳ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಕಳೆದ ಒಂದು ವಾರದ ಹಿಂದೆ ಆಕೆ ತನ್ನ ಗಂಡ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಪ್ರಿಯಕರನ ಜೊತೆ ಓಡಿಹೋಗಿದ್ದಳು. ಈ ಸಂಬAಧ ಶಿವಣ್ಣ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದ.
ಚಿನ್ನಾಭರಣದೊಂದಿಗೆ ಪತ್ನಿ ಪ್ರಿಯಕರನೊಂದಿಗೆ ಪರಾರಿ ಮಕ್ಕಳ ಕೊಂದು ಪತಿ ನೇಣಿಗೆ ಶರಣು



