This is the title of the web page
This is the title of the web page

ಅಪಾರ್ಟ್‍ಮೆಂಟ್‍ನಿಂದ ಜಿಗಿದು ಮಹಿಳೆ ಆತ್ಮಹತ್ಯೆ

ಬೆಂಗಳೂರು: ನಗರದ ಅಪಾರ್ಟ್‍ಮೆಂಟ್‍ನಿಂದ ಜಿಗಿದು ಸೋನು ಪೂಜಾರಿ ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸೋನು ಪೂಜಾರಿ ಎಂಬಾಕೆಯೇ ಮೃತ ದುರ್ದೈವಿ.ಸೋನು ಪತಿ ನಿರಂಜನ್, ಕೆಲಸದ ನಿಮಿತ್ತ ಮುಂಬೈಗೆ ಹೋಗಿದ್ದರು. ಈ ವೇಳೆ ಮನೆಯಲ್ಲಿ ಒಂಟಿಯಾಗಿಯೇ ಇದ್ದ ಸೋನು ಪೂಜಾರಿ ಮುಂಜಾನೆ 8 ಗಂಟೆಗೆ ಅಪಾರ್ಟ್‍ಮೆಂಟ್‍ನ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಘಟನಾ ಸ್ಥಳಕ್ಕೆ ಪುಟ್ಟೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.