ಮಹಿಳಾ ಪ್ರೀಮಿಯರ್ ಲೀಗ್ ನಿನ್ನೆಯಿಂದ ಆರಂಭವಾಗಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ತಂಡ, ಡೆಲ್ಲಿ ಕ್ಯಾಪಿಟಲ್ ಎದುರು ನಾಲ್ಕು ವಿಕೆಟ್ ಗಳ ಭರ್ಜರಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದೆ.
ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಜ್ ಮುಖಮುಖಿಯಾಗಲಿವೆ.ಸ್ಮೃತಿ ಮಂಧಾನ ನಾಯಕತ್ವದ ಆರ್ ಸಿ ಬಿ ತಂಡ ಕಳೆದ ವರ್ಷ ತನ್ನ ಕಳಪೆ ಪ್ರದರ್ಶನದಿಂದ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದು, ಇಂದು ಮನೆ ಅಂಗಳದಲ್ಲಿ ನಡೆಯುತ್ತಿರುವ ತನ್ನ ಮೊದಲ ಪಂದ್ಯದಲ್ಲಿ ಜಯಭೇರಿಯಾಗಲಿದೆಯಾ ಕಾದುನೋಡಬೇಕಾಗಿದೆ.
ಮಾರ್ಚ್ ಹನ್ನೊಂದರವರೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಪಂದ್ಯಗಳಿದ್ದು, ಉಳಿದ ಬಹುತೇಕ ಪಂದ್ಯಗಳು ದೆಹಲಿ ಕ್ರೀಡಾಂಗಣದಲ್ಲಿ ನಡೆಯಲಿವೆ.