ಬೆಂಗಳೂರು: ಸೈಬರ್ ಅಪರಾಧಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ಮಕ್ಕಳ ರಕ್ಷಣಾ ನಿರ್ದೇಶನಾಯಾದ ನಿರ್ದೇಶಕರಾದ ಡಾ.ಸ್ನೇಹ ಸಿ. ವಿಬೆಂಗಳೂರು ನಗರ ವಿಶ್ವವಿದ್ಯಾಲಯ, ಬೆಂಗಳೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಸಹಯೋಗದಲ್ಲಿ ‘ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಕಾನೂನುಗಳ ರಕ್ಷಣೆ’ ಕುರಿತು ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಇದೆ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗೆ ಪೋಕ್ಸೋ ಕಾಯ್ದೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಬಾಲ್ಯ ವಿವಾಹ, ಬಾಲಕಾರ್ಮಿಕತೆ, ಮಕ್ಕಳ ಕಳ್ಳಸಾಗಣೆ ಹಾಗೂ ಸೈಬರ್ ಅಪರಾಧಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು. ಮಕ್ಕಳ ರಕ್ಷಣೆಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಮತ್ತು ಸಮಾಜದ ಪಾತ್ರದ ಬಗ್ಗೆ ವಿಶೇಷವಾಗಿ ತಿಳಿಸಲಾಯಿತು.ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೊ. ರಮೇಶ್ ಬಿ. ವಿದ್ಯಾರ್ಥಿಗಳನ್ನು ಉದ್ದೇಶಿ ಮಾತನಾಡಿದ ಅವರು ಮಕ್ಕಳ ಹಕ್ಕುಗಳು, ಮಕ್ಕಳ ಕಾನೂನುಗಳ ರಕ್ಷಣೆ ವಿದ್ಯಾರ್ಥಿಗಳ ಜವಾಬ್ದಾರಿ, ಪಾತ್ರ ಬಾಲಗರ್ಭಿಣಿ, ಬಾಲ್ಯ ವಿವಾಹ, ಸೈಬರ್ ಪ್ರಕಣಗಳು ಹಾಗೂ ಮಕ್ಕಳ ಮೇಲಿನ ದೌರ್ಜನ್ಯದ ದತ್ತಾಂಶಗಳ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಎನ್ನೋಲ್ಡ್ ಸಂಸ್ಥೆ ನಿರ್ದೇಶಕರಾದ ಖುಷಿ ಕುಶಾಲಪ್ಪ ಮಾತನಾಡಿ “ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012 ರ ಕುರಿತು ವಿವರಣೆ ಹಾಗೂ ಪೋಕೋ ಪ್ರಕರಣ ತಡೆ ಕುರಿತಂತೆ” ವಿದ್ಯಾರ್ಥಿಗಳ ಪಾತ್ರ ಮತ್ತು ಜವಾಬ್ದಾರಿಗಳನ್ನು ತರಬೇತಿ ನೀಡಿದರು. ಹಾಗೂ ಮಕ್ಕಳ ಕಲ್ಯಾಣ ಸಮಿತಿ ಮಾಜಿ ಅಧ್ಯಕ್ಷರಾದ ಮೀನಾ ಜೈನ್ ರವರು ಬಾಲನ್ಯಾಯ ಕಾಯ್ದೆ – 2015, (ತಿದ್ದು ಪಡಿ -2021) ಮಕ್ಕಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮತ್ತು ಜವಾಬ್ದಾರಿ”ಕುರಿತಂತೆ ತರಬೇತಿ ನೀಡಿದರು
ಕಾರ್ಯಕ್ರಮದಲ್ಲಿ ಪ್ರೊ.ರಿತಿಕಾ ಸಿನ್ಹಾ, ಪ್ರಾಧ್ಯಾಪಕರು ಹಾಗೂ ಅಧ್ಯಕ್ಷರು, ಸಮಾಜ ಕಾರ್ಯ ಅಧ್ಯಯನ ಹಾಗೂ ಸಂಶೋಧನ ವಿಭಾಗ, ಡಾ ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಬೆಂಗಳೂರು, ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಹಾಗೂ ಸಂಶೋಧನ ವಿಭಾಗದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿವರ್ಗದವರು, ಸಿಂಡಿಕೇಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ ಸದಸ್ಯರು ವಿದ್ಯಾವಿಷಯಕ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.



