ದೊಡ್ಡಬಳ್ಳಾಪುರ: ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಗರದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಇದೇ ಮೊದಲಬಾರಿಗೆ ಕನ್ನಡದ ಮೊದಲ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ರಾಷ್ಟ್ರಕವಿ ಕುವೆಂಪು ಜನ್ಮದಿನವನ್ನು ವಿಶ್ವ ಮಾನವ ದಿನಾಚರಣೆ ಹೆಸರಿನಿಂದ ಆಚರಿಸಿದ ಸಂದರ್ಭ ಕುವೆಂಪು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸು ಮೂಲಕ ಆಚರಿಸಲಾಯಿತು.
ಈ ಸಮಯದಲ್ಲಿ ಹಿರಿಯ ಕನ್ನಡ ಪರ ಹೋರಾಟಗಾರ ತ.ನಾ.ಪ್ರಭುದೇವ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅದ್ಯಕ್ಷೆ ಪ್ರಮೀಳಾ ಮಹಾದೇವ್, ಕನ್ನಡ ಪಕ್ಷದ ಹಿರಿಯ ಮುಖಂಡ ಸಂಜೀವ್ ನಾಯಕ್, ಕನ್ನಡ ಪಕ್ಷದ ತಾಲ್ಲೂಕು ಅದ್ಯಕ್ಷ ವೆಂಕಟೇಶ್, ಪ್ರಗತಿಪರ ಚಿಂತಕ ಗುರುರಾಜಪ್ಪ ಸೇರಿದಂತೆ ಹಲವರು ಭಾಗಿಯಾಗಿದ್ದರು.