ದೊಡ್ಡಬಳ್ಳಾಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಮಲೇರಿಯಾ ದಿನ ದ ಅಂಗವಾಗಿ `ಹೆಚ್ಚು ಸಮಾನತೆಯ ಜಗತ್ತಿಗೆ, ಮಲೇರಿಯಾ ವಿರುದ್ಧದ ಹೋರಾಟವನ್ನು ತೀವ್ರಗೊಳಿಸೋಣ’ ಎಂಬ ಘೋಷವಾಕ್ಯದೊಂದಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವಿಶ್ವ ಮಲೇರಿಯಾ ದಿನದ ಅರಿವು ಮೂಡಿಸುವ ಸಲುವಾಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಿಂದ ನಗರದ ಟಿ.ಬಿ ವೃತ್ತದ ವರೆಗೆ ಜಾಥಾವನ್ನು ಮಾಡಲಾಯಿತು. ಮಾನವ ನಿರ್ಮಿತ ಸರಪಳಿ ರಚಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನೀಲ್ ಕುಮಾರ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶಾರದ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಶಿವಕುಮಾರ್, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್, ಕೀಟ ಶಾಸ್ತ್ರ ತಜ್ಞರಾದ ಲತಾ, ಆರೋಗ್ಯ ಮೇಲ್ವಿಚಾರಕರಾದ ನಟರಾಜ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.