ವುಮೆನ್ಸ್ ಪ್ರೀಮಿಯರ್ ಲೀಗ್ನ 9ನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡ ಜಯ ಸಾಧಿಸಿದೆ. ಬೆಂಗಳೂರಿನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ ಸಿಬಿ 180 ರನ್ ಗಳಿಸಿದರೆ, ಯುಪಿ ವಾರಿಯರ್ಸ್ ತಂಡ ಕೂಡ 180 ರನ್ ಕಲೆಹಾಕಿತು. ಆ ಬಳಿಕ ನಡೆದ ಸೂಪರ್ ಓವರ್ ನಲ್ಲಿ ಯುಪಿ ವಾರಿಯರ್ಸ್ 8 ರನ್ ಗಳಿಸಿದರೆ, ಆರ್ ಸಿಬಿ 4 ರನ್ ಗಳಿಸಲಷ್ಟೇ ಶಕ್ತರಾದರು.
ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ್ತಿ ಎಲ್ಲಿಸ್ ಪೆರ್ರಿ ಹೊಸ ಇತಿಹಾಸ ಬರೆದಿದ್ದಾರೆ. ಅದು ಸಹ ಬರೋಬ್ಬರಿ 800+ ರನ್ ಗಳನ್ನು ಕಲೆಹಾಕಿದ್ದಾರೆ.