ಇಂದು ವುಮೆನ್ಸ್ ಪ್ರೀಮಿಯರ್ ಲೀಗ್ನ 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಎರಡೂ ತಂಡಗಳಿಗೂ ಈ ಪಂದ್ಯವು ತುಂಬಾ ಮಹತ್ವದ್ದು. ಏಕೆಂದರೆ ಕಳೆದ ಪಂದ್ಯಗಳಲ್ಲಿ ಎರಡೂ ತಂಡಗಳು ಸೋತಿದ್ದು, ಇದೀಗ ಈ ಪಂದ್ಯದಲ್ಲಿ ಗೆಲುವು ಸಾಧಿಸಲು ಎರಡೂ ತಂಡಗಳು ಸಜ್ಜಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ಇಂದ್ರಾಣಿ ರಾಯ್, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಜಾರ್ಜಿಯಾ ವೇಹ್ರ್ಯಾಮ್, ಏಕ್ತಾ ಬಿಶ್ತ್, ಕೇಟ್ ಕ್ರಾಸ್, ಶುಭಾ ಸತೀಶ್, ಸಿಮ್ರಾನ್ ಬಹದ್ದೂರ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನಕ್ಸ್.
ಮುಂಬೈ ಇಂಡಿಯನ್ಸ್ ತಂಡ: ಅಮನ್ಜೋತ್ ಕೌರ್, ಅಮೆಲಿಯಾ ಕೆರ್*, ಕ್ಲೋಯ್ ಟ್ರಯಾನ್*, ಹರ್ಮನ್ಪ್ರೀತ್ ಕೌರ್ (ನಾಯಕಿ), ಹೇಲಿ ಮ್ಯಾಥ್ಯೂಸ್, ಹುಮೈರಾ ಕಾಜಿ, ಇಸಾಬೆಲ್ಲೆ ವಾಂಗ್, ಜಿಂಟಿಮಣಿ ಕಲಿತಾ, ನಟಾಲಿ ಸ್ಕೈವರ್, ಪೂಜಾ ವಸ್ತ್ರಾಕರ್, ಪ್ರಿಯಾಂಕಾ ಬಾಲಾ, ಸೈಕಾ ಇಶಾಕ್, ಯಾಸ್ತಿಕಾ ಭಾಟಿಯಾ, ಶಬ್ನಿಮ್ ಇಸ್ಮಾಯಿಲ್, ಎಸ್ ಸಜನಾ, ಅಮನ್ದೀಪ್ ಕೌರ್, ಫಾತಿಮಾ ಜಾಫರ್, ಕೀರ್ತನಾ ಬಾಲಕೃಷ್ಣನ್.