ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ಹಾಗೂ ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ…ನಡೆಸಿದ್ದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ರೈತರು ಹಾಗೂ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ನಂಜನಗೂಡು ತಾಲೂಕಿನ ಮಲ್ಲುಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ರೈತರು ಹಾಗೂ ಗ್ರಾಮಸ್ಥರು ಚುನಾವಣಾ ಬಹಿಷ್ಕಾರ ಹಾಕುವ ಬೆದರಿಕೆಯೊಡ್ಡಿದ ಹಿನ್ನೆಲೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಕೆಗೆ ಯತ್ನಿಸಿದ್ದರು.ಈ ವೇಳೆ ಪ್ರತಿಭಟನಾ ನಿರತ ಗ್ರಾಮಸ್ಥರು ಯತೀಂದ್ರ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಬಳಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರು, ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ನಿಟ್ಟಿನಲ್ಲಿ ಇಂದು ಗ್ರಾಮಕ್ಕೆ ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಗ್ರಾಮಸ್ಥರ ಸಮಸ್ಯೆ ಆಲಿಸಲು ಮುಂದಾಗುತ್ತಿದ್ದಂತೆ ಪ್ರತಿಭಟನಾಕಾರರು ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದು ಗಲಾಟೆ ಮಾಡಿದ್ದಾರೆ.
ಇಲ್ಲಿಗೆ ಬಂದಿದ್ದೀರಿ. ಇಲ್ಲವಾದರೆ ಬರುತ್ತಿರಲಿಲ್ಲ. ಕಾರ್ಖಾನೆಯಿಂದ ತೊಂದರೆಯಾಗುತ್ತಿದೆ. ಅವರು ನಮ್ಮ ಮಾತು ಕೇಳುತ್ತಿಲ್ಲ ಎಂದು ರೈತರು ಹೇಳಿದ್ದಾರೆ.
ಇದಕ್ಕೆ ಯತೀಂದ್ರ ಸಿದ್ದರಾಮಯ್ಯ, ಸಮಸ್ಯೆ ಬಗ್ಗೆ ನಮ್ಮ ತಂದೆ ಗಮನಕ್ಕೆ ತರುತ್ತೇನೆ ಎಂದಿದ್ದಾರೆ. ಇದನ್ನು ಕೇಳುತ್ತಿದ್ದಂತೆ ಪ್ರತಿಭಟನಾಕಾರರು. ಇಷ್ಟು ದಿನದಿಂದ ಪ್ರತಿಭಟನೆ ನಡೆಸುತ್ತಿದ್ದರೂ ಇನ್ನು ಈ ವಿಚಾರ ನಿಮ್ಮ ತಂದೆ ಗಮನಕ್ಕೆ ತಂದಿಲ್ಲವೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಸ್ಥಳದಿಂದ ವಾಪಾಸ್ ತೆರಳಿದ್ದಾರೆ.