ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಸ್ವಾಮಿ ವಿವೇಕಾನಂದ ಆಟದ ಮೈದಾನದಲ್ಲಿ ಇಂದು ಮಹಾಲಕ್ಷ್ಮಿ ಎಜುಕೇಶನ್ ಟ್ರಸ್ಟ್ ಮತ್ತು ನೆಮ್ಮದಿ ಯೋಗಾಶಾಲೆ ಹಾಗೂ ಪ್ರಣಮ್ ಯೋಗ ಪ್ರತಿಷ್ಠಾನ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರಾದ ಕೆ.ಗೋಪಾಲಯ್ಯನವರು ಭಾಗವಹಿಸಿದರು.
ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯ ಮಾಡಿಕೊ ಟ್ಟಿದ್ದು ನಮ್ಮ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ನಾವು ಪ್ರತಿ ದಿನ ಯೋಗ ಮಾಡಿದರೆ ಯಾವುದೇ ಕಾಯಿಲೆ ಬರುವುದಿಲ್ಲ ಎಂದು ತಿಳಿಸಿದರು.ಇದೇ ವೇಳೆ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಕಮಲಾನಗರದ ಶ್ರೀ ಅಟಲ್ ಬಿಹಾರಿ ವಾಜಪೇಯಿ ಶಾಲೆ ಬಿಬಿಎಂಪಿ ಪ್ರೌಢಶಾಲೆ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಸರ್ಕಾರಿ ಕಟ್ಟಡಗಳಲ್ಲಿ ಯೋಗ ಪಟುಗಳು ಯೋಗ ಅಭ್ಯಾಸ ಮಾಡುವುದಕ್ಕೆ ಉಚಿತವಾಗಿ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ನೆಲ ನರೇಂದ್ರಬಾಬು,ಮಾಜಿ ಬಿಬಿಎಂಪಿ ಉಪಮೇಯರಾದ ಹೇಮಲತಾ ಗೋಪಾಲಯ್ಯ, ಎಸ್ ಹರೀಶ್, ಮಂಡಲದ ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ, ವೆಂಕಟೇಶ್ ಮೂರ್ತಿ, ಶಿವಾನಂದ್, ವೆಂಕಟೇಶ್ ,ಟ್ರಸ್ಟಿನ ಯೋಗ ಶಿಕ್ಷಕರು ಹಾಗೂ ಯೋಗ ವಿದ್ಯಾರ್ಥಿಗಳು ಭಾಗವಹಿಸಿದ್ದರು.