ದೊಡ್ಡಬಳ್ಳಾಪುರ : ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ದಿನಾಚರಣೆಯ ಅಂಗವಾಗಿ ಜೂನ್ 21ರಂದು ಆಯೋಜಿಸಿರುವ ಯೋಗೋತ್ಸವ 2024 ಕಾರ್ಯಕ್ರಮದ ಪೂರ್ವಭಾವಿಯಾಗಿ ಇಂದು ಸರ್ಕಾರಿ ಸಾರ್ವಜನಿಕ ಬಾಲಕರ ವಿದ್ಯಾರ್ಥಿ ನಿಲಯ ಹಣಬೆ ಇಲ್ಲಿ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಹಣಬೆ,ವತಿಯಿಂದ ಯೋಗಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಆಯುಷ್ ಪದ್ಧತಿಗಳ ಬಗ್ಗೆ ಅರಿವು ಆರೋಗ್ಯಕರ ಜೀವನ ಶೈಲಿ ಹಾಗೂ ಯೋಗದ ಮಹತ್ವದ ಬಗ್ಗೆ ತಿಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಹಣಬೆ ಗ್ರಾಮದ ಆಯುರ್ವೇದ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ// ಎ. ಎಸ್.ಪುಷ್ಪಲತಾ ಮಾತನಾಡಿ ಯೋಗ ಮಾಡುವುದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯಕರವಾಗಿರಲು ಸಹಾಯಕವಾಗುತ್ತದೆ. ಅಷ್ಟೇ ಅಲ್ಲದೆ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸುವಲ್ಲಿ ಯೋಗಸನ ಸಹಕಾರಿಯಾಗಿದೆ ಎಂದರು.
ಯೋಗಾಸನದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಮೂಲಕ ಶಿಕ್ಷಕರು ಮಕ್ಕಳ ಸರ್ವೋತೋಮುಖ ಅಭಿವೃದ್ದಿಗೆ ಶ್ರಮಿಸಬೇಕಿದೆ ಎಂದರು.
ಯೋಗ ತರಬೇತುದರರಾದ ಗೌತಮ್ ಮಕ್ಕಳಿಗೆ ಯೋಗಾಸನ ಅಭ್ಯಾಸ ಹಾಗೂ ಪ್ರಾಣಾಯಾಮ ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿನಿಲಯ ಮೇಲ್ವಿಚಾರಕರಾದ ಅಣ್ಣಯ್ಯ ಹಾಗೂ ಹಾಸ್ಟೇಲ್ ಸಿಬ್ಬಂದಿಗಳು ಹಾಜರಿದ್ದು.