ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯ ಶುರುವಾಗಿದೆ. ಮುಲ್ಲನ್ಪುರ್ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಅಫ್ಘಾನಿಸ್ತಾನ್ ತಂಡ ಮೊದಲು ಬೌಲಿಂಗ್ ಮಾಡಲಿದೆ.ಇನ್ನು ಈ ಪಂದ್ಯದ ಮೂಲಕ 23 ವರ್ಷದ ಯುವ ಸ್ಪಿನ್ನರ್ ಮಾನವ್ ಸುತಾರ್ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.
ಭಾರತ (ಪ್ಲೇಯಿಂಗ್ XI): ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಶುಭ್ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ಮಾನವ್ ಸುತಾರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.ಅಫ್ಘಾನಿಸ್ತಾನ್ (ಪ್ಲೇಯಿಂಗ್ XI): ಸೇದಿಕುಲ್ಲಾ ಅಟಲ್, ರಹಮಾನುಲ್ಲಾ ಗುರ್ಬಾಝ್, ಅಬ್ದುಲ್ ಮಲಿಕ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಫ್ಸರ್ ಝಜೈ(ವಿಕೆಟ್ ಕೀಪರ್), ಅಝ್ಮತುಲ್ಲಾ ಒಮಝಾಹಿ, ಶರಫುದ್ದೀನ್ ಅಶ್ರಫ್, ನಂಗಿಯಾಲೈ ಖರೋಟಿ, ಝಿಯಾವುರ್ ರಹಮಾನ್ ಶರೀಫಿ, ಮೊಹಮ್ಮದ್ ಶರೀಫಿ.8 ವರ್ಷಗಳ ಬಳಿಕ ಮುಖಾಮುಖಿ ಭಾರತ ಮತ್ತು ಅಫ್ಘಾನಿಸ್ತಾನ್ ತಂಡ ಈವರೆಗೆ ಒಂದು ಟೆಸ್ಟ್ ಪಂದ್ಯದಲ್ಲಿ ಮಾತ್ರ ಮುಖಾಮುಖಿಯಾಗಿದೆ. ಅದು ಸಹ 2018 ರಲ್ಲಿ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 262 ರನ್ಗಳ ಜಯ ಸಾಧಿಸಿತ್ತು.ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದ ಈ ಮ್ಯಾಚ್ನಲ್ಲಿ ಟಾಸ್ ಗೆದ್ದ ಅಂದಿನ ಟೀಮ್ ಇಂಡಿಯಾ ನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್ ಆಯ್ದುಕೊಂಡಿದ್ದರು.
ಇದೀಗ ಬರೋಬ್ಬರಿ 8 ವರ್ಷಗಳ ಬಳಿಕ ಉಭಯ ತಂಡಗಳು ಟೆಸ್ಟ್ ಕ್ರಿಕೆಟ್ನಲ್ಲಿ ಮತ್ತೊಮ್ಮೆ ಮುಖಾಮುಖಿಯಾಗಿದ್ದಾರೆ. ಈ ಬಾರಿ ಅಫ್ಘಾನ್ ಪಡೆ ಎದುರಿಸುತ್ತಿರುವುದು ಯಂಗ್ ಇಂಡಿಯಾವನ್ನು. ಹೀಗಾಗಿ ಉಭಯ ತಂಡಗಳಿAದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.
ಯುವ ಆಟಗಾರ ಪಾದಾರ್ಪಣೆ: ಟೀಮ್ ಇಂಡಿಯಾ ಪ್ಲೇಯಿಂಗ್ 11



