ಬೆಂಗಳೂರು ನಗರ ಜಿಲ್ಲೆ: ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಯುವಜನತೆಯ ಉಜ್ಜಲ ಭವಿಷ್ಯಕ್ಕಾಗಿ ಗ್ಯಾರಂಟಿ ಯೋಜನೆ ಯುವನಿಧಿ ನೋಂದಣಿ ಪ್ರಕ್ರಿಯು ಪ್ರಾರಂಭವಾಗಿದ್ದು ಅರ್ಹ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಬಹುದು.
ಅರ್ಹತೆ: 2023 ರಲ್ಲಿ ಪದವಿ/ ಡಿಪ್ಲೋಮಾ ಉತ್ತೀರ್ಣರಾಗಿರಬೇಕು, ಪದವಿ/ ಡಿಪ್ಲೋ ಳಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ/ ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಹಾಗೂ ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ/ ಡಿಪ್ಲೋ ವಮಾದವರಗೆ ಅಧ್ಯಯನ ಮಾಡಿದವರು).
ವಿದ್ಯಾರ್ಥಿಗಳು ನೋಂದಣಿಗೆ ಅಗತ್ಯವಿರುವ ದಾಖಲಾತಿಗಳು- ಎಸ್.ಎಸ್.ಎಲ್.ಸಿ, ಪದವಿ/ ಡಿಪ್ಲೋಮಾ ಪ್ರಮಾಣ ಪತ್ರ ಹೊಂದಿರಬೇಕು.ಆಸಕ್ತರು ನೋಂದಯಿಸಲು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಗೆ ಭೇಟಿ ನೀಡಿ ಉಚಿತವಾಗಿ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಭಿವೃದ್ಧಿ ಅಧಿಕಾರಿಗಳ ಕಛೇರಿ, ಬೆಂಗಳೂರು ನಗರ ಜಿಲ್ಲೆ, #55, ನೆಲ ಮಹಡಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, ರಿಸಲ್ದಾರ್ ರಸ್ತೆ, ಶೇಷಾದ್ರಿಪುರ, ಬೆಂಗಳೂರು-20 ಅಥವಾ ದೂರವಾಣಿ ಸಂಖ್ಯೆ: 080-23462727, ಸಹಾಯವಾಣಿ:18005999918 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.