This is the title of the web page
This is the title of the web page

ಯುವ ಮತದಾರರ ಜಾಗೃತಿ ಕಾರ್ಯಕ್ರಮ

ಬೆಂಗಳೂರು: ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಯುವ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಮಾನ್ಯ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಅವರು ಚಾಲನೆ ನೀಡಿದರು.

ವಲಯ ಆಯುಕ್ತರಾದ ಶ್ರೀ ಬಾಬು ಶಂಕರ್ ರೆಡ್ಡಿ, ಆರ್ ವಿ ಇಂಜಿನಿಯರಿಂಗ್ ಕಾಲೇಜಿನ ಉಪ ಪ್ರಾಂಶುಪಾಲೆ ಶ್ರೀಮತಿ ಕೆ ಎಸ್ ಗೀತಾ, ಭೋದಕ, ಭೋದಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮೊದಲ ಬಾರಿ ಮತದಾನ ಮಾಡುತ್ತಿರುವ ವಿದ್ಯಾರ್ಥಿಗಳೊಂದಿಗೆ ಜಿಲ್ಲಾ ಚುನಾವಣಾಧಿಕಾರಿಗಳು ಸಂವಾದ ನಡೆಸಿ, ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರೇರೇಪಿಸಿದರು.